masthmagaa.com:

ದೇಶದಲ್ಲಿ ಕೊರೋನಾ ಹಾವಳಿ ದಿನೇದಿನೆ ಹೆಚ್ಚಾಗ್ತಾನೇ ಇದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 17,296 ಜನರಿಗೆ ಹೊಸದಾಗಿ ಸೋಂಕು ತಾಗಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಒಂದೇ ದಿನ ಇಷ್ಟು ಜನರಿಗೆ ಸೋಂಕು ತಗುಲಿರೋದು ಇದೇ ಮೊದಲು. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,90,401ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 407 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 15,301 ಆಗಿದೆ. ಇದುವರೆಗೆ 2,85,637 ಜನ ಗುಣಮುಖರಾಗಿದ್ದಾರೆ. 1,89,463 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಟ್ಟು ಸೋಂಕಿತರ ಸಂಖ್ಯೆ 1.47 ಲಕ್ಷ ದಾಟಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 73 ಸಾವಿರ, ತಮಿಳುನಾಡಿನಲ್ಲಿ 70 ಸಾವಿರ ಮತ್ತು ಗುಜರಾತ್​ನಲ್ಲಿ 29 ಸಾವಿರಕ್ಕೂ ಹೆಚ್ಚು​ ಪ್ರಕರಣಗಳು ದೃಢಪಟ್ಟಿವೆ. ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ 12ನೇ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply