masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 14,313 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. 181 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 39 ಲಕ್ಷದ 85 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,50,963 ಆಗಿದೆ.

ಕಳೆದ 24 ಗಂಟೆಗಳಲ್ಲಿ 26,579 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 33 ಲಕ್ಷ 20 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2 ಲಕ್ಷದ 14 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.04 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 11.81 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 58.50 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 65.86 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 95.89 ಕೋಟಿಗೂ ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply