ದೇಶದಲ್ಲಿ ಕಳೆದ 6 ತಿಂಗಳಲ್ಲೇ ಕಡಿಮೆ ಕೊರೋನಾ ಕೇಸ್!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,732 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 1 ಲಕ್ಷದ 87 ಸಾವಿರ ದಾಟಿದೆ. 279 ಮಂದಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,47,622ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ ಇಷ್ಟು ಕಮ್ಮಿ ಕೊರೋನಾ ಪ್ರಕರಣ ದೃಢಪಟ್ಟಿರೋದು ಕಳೆದ 6 ತಿಂಗಳಲ್ಲಿ ಇದೇ ಮೊದಲು. ಈ ಹಿಂದೆ ಜುಲೈ 1 ರಂದು 18,653 ಪ್ರಕರಣ ದೃಢಪಟ್ಟಿತ್ತು.

ಇನ್ನು ಕಳೆದ 24 ಗಂಟೆಗಳಲ್ಲಿ 21,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 97.61 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2.78 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ ಶೇ.95.82ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ ಶೇ. 1.45ರಷ್ಟು ಇದೆ. ಡಿಸೆಂಬರ್ 26ರಂದು 9.43 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 16.81 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply