masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 12,428 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 356 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 42 ಲಕ್ಷದ 02 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,55,068 ಆಗಿದೆ.

ಕಳೆದ 24 ಗಂಟೆಗಳಲ್ಲಿ 15,951 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 35 ಲಕ್ಷ 83 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 63 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.19 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.33 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 11.31 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 60.19 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 64.75 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 102.94 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply