ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷತೆ!

masthmagaa.com:

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ಭಾರತ ವಹಿಸಿಕೊಳ್ತಿದೆ. ಇಂದಿನಿಂದ ಆಗಸ್ಟ್​ ಅಂತ್ಯದವರೆಗೆ ಈ ಹುದ್ದೆಯಲ್ಲಿ ಭಾರತ ಮುಂದುವರಿಯಲಿದೆ. ಈ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ ಮೊದಲ ಪ್ರಧಾನಿ ಅನ್ನೋ ಹೆಗ್ಗಳಿಕೆಗೆ ಮೋದಿ ಪಾತ್ರವಾಗಲಿದ್ದಾರೆ. ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಫ್ರಾನ್ಸ್ ಈ ಹುದ್ದೆಯನ್ನು ಅಲಂಕರಿಸಿತ್ತು. ಇದೀಗ ಅಧ್ಯಕ್ಷತೆ ವಹಿಸಿಕೊಂಡಿರೋ ಭಾರತ ಈ ಹಿಂದೆ ಇದ್ದ ಫ್ರಾನ್ಸ್​​ ತನಗೆ ನೀಡಿದ ಸಹಕಾರಕ್ಕೆ ಧನ್ಯವಾದ ತಿಳಿಸಿದೆ. ಇನ್ನು ತನ್ನ ಅಧ್ಯಕ್ಷತೆಯ ಅವಧಿಯಲ್ಲಿ ಭಾರತ ಮೂರು ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತೆ. ಸಾಗರ ಭದ್ರತೆ, ಶಾಂತಿ ಪಾಲನೆ, ಭಯೋತ್ಪಾದನೆ ನಿಗ್ರಹವನ್ನು ಒಳಗೊಂಡಿದೆ ಅಂತ ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರೋ ಟಿಎಸ್ ತಿರುಮೂರ್ತಿ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply