masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,088 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 264 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 3 ಲಕ್ಷದ 74 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,50,114ಕ್ಕೆ ಏರಿಕೆಯಾಗಿದೆ. ಈ ಮೂಲಕ ಕೊರೋನಾದಿಂದ ಒಂದೂವರೆ ಲಕ್ಷ ಜನ ಮೃತಪಟ್ಟ 3ನೇ ದೇಶ ಎನಿಸಿಕೊಂಡಿದೆ ಭಾರತ. ಮೊದಲೆರಡು ಸ್ಥಾನದಲ್ಲಿ ಅಮೆರಿಕ ಮತ್ತು ಬ್ರೆಜಿಲ್ ಇದೆ. ಅಮೆರಿಕದಲ್ಲಿ 3.57 ಲಕ್ಷ ಮತ್ತು ಬ್ರೆಜಿಲ್​ನಲ್ಲಿ 1.97 ಲಕ್ಷ ಜನ ಕೊರೋನಾಗೆ ಬಲಿಯಾಗಿದ್ದಾರೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,000 ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 99.97 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 2.27 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 96.36 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.45 ಪರ್ಸೆಂಟ್ ಇದೆ. ಜನವರಿ 5ರಂದು 9.31 ಲಕ್ಷ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ಒಟ್ಟು 17.74 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply