ಭಾರತ-ಅಮೆರಿಕ ವ್ಯಾಪಾರ ಸಂಬಂಧ ವಿಸ್ತರಣೆಗೆ ಸಮ್ಮತಿ

masthmagaa.com:

ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಸಂಬಂಧವನ್ನು ವಿಸ್ತರಿಸಲು ಮತ್ತು ವಿವಾದಗಳನ್ನು ಬಗೆಹರಿಸಲು ರಚನಾತ್ಮಕವಾಗಿ ಕೆಲಸ ಮಾಡಲು ಉಭಯದೇಶಗಳು ಒಪ್ಪಿಕೊಂಡಿವೆ.. ಹೀಗಂತ ಬೈಡೆನ್ ಆಡಳಿತವೇ ಸ್ಪಷ್ಟಪಡಿಸಿದೆ. ಅಮೆರಿಕದ ವಾಣಿಜ್ಯ ಪ್ರತಿನಿಧಿ ಕ್ಯಾಥರಿನ್ ತೈ ಭಾರತದ ವಾಣಿಜ್ಯ ಮತ್ತು ಉದ್ಯಮ ಸಚಿವ ಪಿಯೂಷ್ ಗೋಯಲ್ ಜೊತೆ ಫೋನ್ ಮಾಡಿ ಮಾತನಾಡಿದ್ದಾರೆ.

ಈ ವೇಳೆ ಎರಡು ದೇಶಗಳ ನಡುವಿನ ವ್ಯಾಪಾರ ಮತ್ತು ಬಂಡವಾಳ ಹೂಡಿಕೆ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೆ ವ್ಯಾಪಾರದಲ್ಲಿ ಅಮೆರಿಕ ಮತ್ತು ಭಾರತದ ನಡುವಿನ ಸಹಕಾರವನ್ನು ಹೆಚ್ಚಿಸಲು ಉಭಯ ನಾಯಕರು ಸಮ್ಮತಿಸಿದ್ದಾರೆ. ಜೊತೆಗೆ ಇದೇ ವಿಚಾರವಾಗಿ ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಿದ್ದಾರೆ.

-masthmagaa.com

Contact Us for Advertisement

Leave a Reply