ದಾಖಲೆ ಬರೆದ ಕಿಂಗ್ ಕೊಹ್ಲಿ ಹಾಗೂ ಇಶಾನ್‌ ಕಿಶನ್‌!

masthmagaa.com:

ಬಾಂಗ್ಲಾ ವಿರುದ್ದದ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಭಾರತದ ಆಟಗಾರರು ದಾಖಲೆಗಳನ್ನ ಪುಡಿಗಟ್ಟಿದ್ದಾರೆ. ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಬಾಂಗ್ಲಾದೇಶದ ವಿರುದ್ದ ಭರ್ಜರಿ ಶತಕ ಬಾರಿಸೊ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಅವ್ರನ್ನ ಹಿಂದಿಕ್ಕಿದ್ದಾರೆ. ಆಸ್ಟ್ರೇಲಿಯಾ ಪರ 668 ಇನಿಂಗ್ಸ್ ಆಡಿದ್ದ ಪಾಂಟಿಂಗ್ 71 ಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ವಿರಾಟ್ ಕೊಹ್ಲಿ 535 ಇನಿಂಗ್ಸ್​ಗಳ ಮೂಲಕ ಒಟ್ಟು 72 ಶತಕಗಳನ್ನ ಸಿಡಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ. ಇನ್ನು ಅಗ್ರಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇದ್ದಾರೆ. ಸಚಿನ್ 782 ಇನಿಂಗ್ಸ್​ ಮೂಲಕ 100 ಶತಕ ಬಾರಿಸಿದ ವಿಶ್ವದ ಏಕೈಕ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನೊಂದ್‌ ಕಡೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ ಇಶಾನ್‌ ಕಿಶನ್‌ ಏಕದಿನ ಕ್ರಿಕೆಟ್‌ ಇತಿಹಾಸದಲ್ಲೇ ಅತ್ಯಂತ ವೇಗದ ದ್ವಿಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಬಾಂಗ್ಲಾದೇಶದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ 126 ಎಸೆತಗಳಲ್ಲಿ 200 ರನ್‌ ಚಚ್ಚಿದ್ದಾರೆ. ಈ ಮೂಲಕ 2015ರಲ್ಲಿ ವೆಸ್ಟ್‌ ಇಂಡೀಸ್‌ ಆಟಗಾರ ಕ್ರಿಸ್‌ ಗೇಲ್‌ ಜಿಂಬಾಬ್ವೆ ವಿರುದ್ದ 138 ಎಸೆತಗಳಲ್ಲಿ ದ್ವಿಶತಕ ಬಾರಿಸಿದ ಸಾಧನೆಯನ್ನ ಧೂಳಿಪಟ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply