ಭಾರತ-ನ್ಯೂಜಿಲ್ಯಾಂಡ್‌ ಸರಣಿ ಗೆದ್ದ ಭಾರತ!

masthmagaa.com:

ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಮೂರನೇ ಮತ್ತು ಅಂತಿಮ ಟಿ20 ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯನ್ನ 1-0 ಅಂತರದಿಂದ ಭಾರತ ಕೈವಶ ಮಾಡಿಕೊಂಡಿದೆ. ಅಂದ್ಹಾಗೆ ಮಳೆಯಿಂದಾಗಿ ಮೊದಲ ಪಂದ್ಯವನ್ನ ರದ್ದುಗೊಳಿಸಲಾಗಿತ್ತು. ಇದಾದ ಬಳಿಕ 2ನೇ ಪಂದ್ಯವನ್ನ ಭರ್ಜರಿಯಾಗಿ ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು. ಇನ್ನು ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲ್ಯಾಂಡ್‌ 19.4 ಓವರ್‌ಗಳಲ್ಲಿ 160 ರನ್‌ಗಳಿಗೆ ಆಲೌಟ್‌ ಆಯ್ತು. ಆದರೆ ಈ ನಂತರ ಮಳೆ ಬಂದ ಕಾರಣದಿಂದಾಗಿ ಪಂದ್ಯವನ್ನ ಆಡೋಕೆ ಆಗ್ಲಿಲ್ಲ. ಹೀಗಾಗಿ ಅಂಪೈರ್‌ಗಳು ಪಂದ್ಯವನ್ನ ಟೈ ಅಂತ ಘೋಷಿಸಿದ್ರು.

-masthmagaa.com

Contact Us for Advertisement

Leave a Reply