ಕೊರೋನಾ ಲಸಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

masthmagaa.com:

ಭಾರತದಲ್ಲಿ ಕೊರೋನಾ ವೈರಸ್​ಗೆ ಸಂಬಂಧಿಸಿದಂತೆ ಅಭಿವೃದ್ಧಿಯಾಗುತ್ತಿರುವ ಲಸಿಕೆ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ಅಂದ್ರೆ 2021ರ ಮಾರ್ಚ್​ ಒಳಗೆ ಭಾರತದ ಲಸಿಕೆ ಸಿಗುವ ಸಾಧ್ಯತೆ ಇದೆ ಎಂದಿದ್ದಾರೆ.

ಜೊತೆಗೆ ಲಸಿಕೆಯ ಸುರಕ್ಷತೆ ಬಗ್ಗೆ ಯಾರಿಗಾದ್ರೂ ಅನುಮಾನ ಇದ್ದರೆ ನಾನೇ ಮೊದಲ ಲಸಿಕೆ ಹಾಕಿಕೊಳ್ಳುತ್ತೇನೆ ಎಂದಿದ್ದಾರೆ. ಇದರ ಜೊತೆಗೆ ಯಾರು ಎಷ್ಟೇ ಶ್ರೀಮಂತರಾಗಿದ್ದರೂ ಕೂಡ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ, ಹಿರಿಯ ನಾಗರಿಕರು, ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಮೊದಲು ಲಸಿಕೆ ನೀಡಲಾಗುತ್ತೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply