masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 32,981 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 391 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 96.77 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,40,573 ಆಗಿದೆ. ಒಂದು ದಿನದಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೂ ಕಡಿಮೆಯಾಗಿರೋದು 157 ದಿನಗಳ ಬಳಿಕ ಇದೇ ಮೊದಲು.

ಕಳೆದ 24 ಗಂಟೆಗಳಲ್ಲಿ 39,109 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 91.39 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3.96 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬರೋಬ್ಬರಿ 140 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷಕ್ಕಿಂತ ಕಡಿಮೆಯಾಗಿದೆ. ಭಾರತದಲ್ಲಿ ಗುಣಮುಖ ಪ್ರಮಾಣ 94.45%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.45% ಇದೆ. ಡಿಸೆಂಬರ್ 6ರಂದು 8.01ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 14.77 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply