10 ಕೋಟಿ ದಾಟಿದ ಕೊರೋನಾ ಪರೀಕ್ಷೆ.. ಸಕ್ರಿಯ ಪ್ರಕರಣ ದಾಖಲೆ ಮಟ್ಟದಲ್ಲಿ ಇಳಿಕೆ

masthmagaa.com:

ದೇಶದಲ್ಲಿ ಮತ್ತೊಮ್ಮೆ 55 ಸಾವಿರಕ್ಕೂ ಕಡಿಮೆ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಕಳೆದ 24 ಗಂಟೆಗಳಲ್ಲಿ 54,366 ಜನರಿಗೆ ಹೊಸದಾಗಿ ಸೋಂಕು ತಗುಲಿದ್ದು, 690 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 77.61 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.17 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 73,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 69.48 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6.95 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂಲಕ ಕಳೆದ ಎರಡು ತಿಂಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕೂ ಕಮ್ಮಿಯಾಗಿದೆ. ಈ ಹಿಂದೆ ಆಗಸ್ಟ್​​ 22ರಂದು ಸಕ್ರಿಯ ಪ್ರಕರಣಗಳು 6.97 ಲಕ್ಷಕ್ಕೆ ಇಳಿದಿತ್ತು, ಅದಾದ ಬಳಿಕ ಇದೇ ಮೊದಲು ಸಕ್ರಿಯ ಪ್ರಕರಣಗಳ ಸಂಖ್ಯೆ 7 ಲಕ್ಷಕ್ಕೂ ಕಡಿಮೆಯಾಗಿದೆ.

ಭಾರತದಲ್ಲಿ ಸದ್ಯ ಗುಣಮುಖ ಪ್ರಮಾಣ 89.53% ಇದ್ದು, ಸಾವಿನ ಪ್ರಮಾಣ 1.51% ಇದೆ. ಅಕ್ಟೋಬರ್ 22ರಂದು 14.42 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 10.01 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply