masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29,398 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 414 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 97.96 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,42,186 ಆಗಿದೆ.

ಕಳೆದ 24 ಗಂಟೆಗಳಲ್ಲಿ 37,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 92.90 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3.63 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣ ಈ ಪ್ರಮಾಣಕ್ಕೆ ಕುಸಿದಿರೋದು 146 ದಿನಗಳ ಬಳಿಕ ಇದೇ ಮೊದಲು. ಭಾರತದಲ್ಲಿ ಗುಣಮುಖ ಪ್ರಮಾಣ 94.84%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.45% ಇದೆ. ಡಿಸೆಂಬರ್ 10ರಂದು 8.72 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 15.16 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply