ದೇಶದಲ್ಲಿ 24 ಗಂಟೆಯಲ್ಲಿ ಎಷ್ಟು ಜನರಿಗೆ ಕೊರೋನಾ? ಎಷ್ಟು ಸಾವು?

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,823 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 162 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 5 ಲಕ್ಷದ 95 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,52,718ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 16,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1 ಕೋಟಿ 2 ಲಕ್ಷದ 45 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 97 ಸಾವಿರ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಪ್ಟೆಂಬರ್​ನಲ್ಲಿ 10 ಲಕ್ಷ ಇದ್ದ ಆ್ಯಕ್ಟಿವ್ ಕೇಸಸ್ ಈಗ 2 ಲಕ್ಷಕ್ಕೂ ಕಮ್ಮಿಯಾಗಿದೆ. ಭಾರತದಲ್ಲಿ ಗುಣಮುಖ ಪ್ರಮಾಣ 96.70 ಪರ್ಸೆಂಟ್ ಇದ್ದು , ಸಾವಿನ ಪ್ರಮಾಣ 1.44 ಪರ್ಸೆಂಟ್ ಇದೆ. ಜನವರಿ 19ರಂದು 7.64 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 18.85 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply