masthmagaa.com:

ದೆಹಲಿ: ಭಾರತದಲ್ಲಿ ಅಲ್ಲೊಂದು ಇಲ್ಲೊಂದು ಅಂತ ಶುರುವಾದ ಕೊರೋನಾ ಈಗ ಕೋಟಿ ಗಡಿ ದಾಟಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,152 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿ 4 ಸಾವಿರ ಆಗಿದೆ. ನಿನ್ನೆ ಒಂದೇ ದಿನ 347 ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 1,45,136ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 29,000ಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 95.50 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 3.8 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ ಶೇ.95.46ಕ್ಕೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ ಶೇ.1.45ರಷ್ಟು ಇದೆ. ಡಿಸೆಂಬರ್ 18ರಂದು 11.71 ಲಕ್ಷ ಕೊರೋನಾ ಪರೀಕ್ಷೆಗಳನ್ನು  ನಡೆಸಲಾಗಿದ್ದು, ಇದುವರೆಗೆ ಒಟ್ಟು 16 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply