ದೇಶದಲ್ಲಿ 17 ಸಾವಿರ ಸೋಂಕಿತರು.. ಜಗತ್ತಿನಲ್ಲಿ 17ನೇ ಸ್ಥಾನ..!

masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,553 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 17,265ಕ್ಕೆ ಏರಿಕೆಯಾಗಿದೆ. ಇದರಲ್ಲಿ 543 ಜನ ಪ್ರಾಣ ಕಳೆದುಕೊಂಡಿದ್ದು, ಎರಡೂವರೆ ಸಾವಿರ ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 14,175 ಆ್ಯಕ್ಟಿವ್ ಕೇಸ್​ಗಳಿವೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 4 ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ್ದು, 223 ಮಂದಿ ಬಲಿಯಾಗಿದ್ದಾರೆ. ದೆಹಲಿ, ಗುಜರಾತ್, ರಾಜಸ್ಥಾನ, ತಮಿಳುನಾಡು ಹಾಗೂ ಮಧ್ಯಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ.

ಜಾಗತಿಕ ಸೋಂಕಿತರ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ರೆ, ಸ್ಪೇನ್ ಹಾಗೂ ಇಟಲಿ ನಂತರದ ಸ್ಥಾನದಲ್ಲಿವೆ. ಭಾರತ 17 ಸಾವಿರ ಸೋಂಕಿತರೊಂದಿಗೆ 17ನೇ ಸ್ಥಾನದಲ್ಲಿದೆ ಅಂತ ಜಾನ್ ಹಾಪ್ಕಿನ್ಸ್​ ಯುನಿರ್ಸಿಟಿ ಹೇಳಿದೆ.

-masthmagaa.com

Contact Us for Advertisement

Leave a Reply