masthmagaa.com:

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,209 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 501 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 90.95 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1,33,227 ಆಗಿದೆ.

ಕಳೆದ 24 ಗಂಟೆಗಳಲ್ಲಿ 43,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 85.21 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 4.40 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 93.69%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.46%ಗೆ ಇಳಿಕೆಯಾಗಿದೆ. ನವೆಂಬರ್‌ 21ರಂದು 10.75 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 13.17 ಕೋಟಿ ಕೊರೋನಾ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

-masthmagaa.com

Contact Us for Advertisement

Leave a Reply