masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 86,498 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು, 2,123 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ 89 ಲಕ್ಷದ 96 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,51,309 ಆಗಿದೆ.

ಕಳೆದ 24 ಗಂಟೆಗಳಲ್ಲಿ 1 ಲಕ್ಷದ 82 ಸಾವಿರಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 73 ಲಕ್ಷದ 41 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 13 ಲಕ್ಷದ 03 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.  ದೇಶದಲ್ಲಿ ಈಗ ಪಾಸಿಟಿವಿಟಿ ದರ 4.62% ಗೆ ಇಳಿದಿದೆ.

ಭಾರತದಲ್ಲಿ ಗುಣಮುಖ ಪ್ರಮಾಣ 94.29 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.21 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 36.82 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 36.82 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 23.61 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 33.64 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply