masthmagaa.com:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,408 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು 836 ಸೋಂಕಿತರು ಮೃತಪಟ್ಟಿದ್ದಾರೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31.06 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 57,542 ಆಗಿದೆ.
ಕಳೆದ 24 ಗಂಟೆಗಳಲ್ಲಿ 57,000+ ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 23.38 ಲಕ್ಷ ದಾಟಿದ್ದು, 7.10 ಲಕ್ಷ ಸೋಂಕಿತರು ಇನ್ನೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದಲ್ಲಿ ಗುಣಮುಖ ಪ್ರಮಾಣ 75.27% ಇದ್ದು, ಸಾವಿನ ಪ್ರಮಾಣ 1.85% ಇದೆ. 22.88% ಸೋಂಕಿತರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಗಸ್ಟ್ 23ರಂದು ದೇಶದಲ್ಲಿ 6.09 ಲಕ್ಷ ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ. ಇದುವರೆಗೆ 3.59 ಕೋಟಿ ಸ್ಯಾಂಪಲ್ಗಳನ್ನ ಪರೀಕ್ಷೆ ಮಾಡಲಾಗಿದೆ ಅಂತ ಐಸಿಎಂಆರ್ ತಿಳಿಸಿದೆ.
ಸತತ 20ನೇ ದಿನವೂ ಭಾರತದಲ್ಲಿ ಅಮೆರಿಕ ಮತ್ತು ಬ್ರೆಜಿಲ್ಗಿಂತ ಹೆಚ್ಚು ಕೊರೋನಾ ಪ್ರಕರಣ ದೃಢಪಟ್ಟಿದೆ. ಮೊದಲ ಸ್ಥಾನದಲ್ಲಿರುವ ಅಮೆರಿಕದಲ್ಲಿ 34,000ಕ್ಕೂ ಹೆಚ್ಚು ಮತ್ತು ಎರಡನೇ ಸ್ಥಾನದಲ್ಲಿರುವ ಬ್ರೆಜಿಲ್ನಲ್ಲಿ 23,000ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದೆ. ಭಾರತದಲ್ಲಿ 61,000ಕ್ಕೂ ಹೆಚ್ಚು.
-masthmagaa.com
Contact Us for Advertisement