ದೇಶದಲ್ಲಿ 5 ಸಾವಿರ ಸೋಂಕಿತರು.. ಐದೇ ದಿನದಲ್ಲಿ ಡಬಲ್..!

masthmagaa.com:

ದೇಶದಲ್ಲಿ ದಿನೇದಿನೆ ಹೆಚ್ಚಾಗ್ತಿರೋ ಕೊರೋನಾ ಸೋಂಕಿತರ ಸಂಖ್ಯೆ ಇದೀಗ 5,000 ಗಡಿ ದಾಟಿದೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇದುವರೆಗೆ ದೇಶದಲ್ಲಿ5,194 ಜನರಲ್ಲಿ ಸೋಂಕು ದೃಢಪಟ್ಟಿದ್ದು, 149 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 35 ಮಂದಿ ಮೃತಪಟ್ಟಿದ್ದು, 773 ಜನರಿಗೆ ಸೋಂಕು ತಗುಲಿರೋದು ಆತಂಕ ಹೆಚ್ಚಿಸಿದೆ. ಏಪ್ರಿಲ್ 2ರಂದು ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,580 ಇತ್ತು. ಆ ಸಂಖ್ಯೆ ಈಗ ದುಪ್ಪಟ್ಟಾಗಿದೆ.

ದೇಶದ ಪೈಕಿ ಮಹಾರಾಷ್ಟ್ರದಲ್ಲೇ ಕೊರೋನಾ ಹಾವಳಿ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಜೊತೆಗೆ 64 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಗುಜರಾತ್ ಹಾಗೂ ಮಧ್ಯಪ್ರದೇಶದಲ್ಲಿ ತಲಾ 13, ದೆಹಲಿಯಲ್ಲಿ 9,  ಪಂಜಾಬ್, ತಮಿಳುನಾಡು, ತೆಲಂಗಾಣದಲ್ಲಿ ತಲಾ 7 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿದ್ದು, 175 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ.

-masthmagaa.com

Contact Us for Advertisement

Leave a Reply