masthmagaa.com:

ನವೆಂಬರ್ 12ರಿಂದ 14ವರೆಗೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಅಲ್ಲಲ್ಲಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ಇವತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (Karnataka State Natural Disaster Monitoring Centre) ಕೂಡ ಮಳೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ ಅಂತ KSNDMC ಹೇಳಿದೆ. ಭಾರತೀಯ ಹವಾಮಾನ ಇಲಾಖೆ (IMD) ಇವತ್ತು ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲೂ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಕಾಣುತ್ತಿದೆ.

-masthmagaa.com

Contact Us for Advertisement

Leave a Reply