7 ತಿಂಗಳ ಬಳಿಕ ಜಮ್ಮು ಕಾಶ್ಮೀರ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ರಿಲೀಸ್..!

masthmagaa.com:

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಅವರನ್ನು ಈ ಕೂಡಲೇ ಬಿಡುಗಡೆಗೊಳಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಆದೇಶಿಸಿದೆ. ನ್ಯಾಷನಲ್ ಕಾನ್ಫರೆನ್ಸ್​ನ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾರನ್ನು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ವೇಳೆ ವಶಕ್ಕೆ ಪಡೆಯಲಾಗಿತ್ತು. ಕಳೆದ 7 ತಿಂಗಳಿಂದ ಗೃಹಬಂಧನದಲ್ಲಿದ್ದ ಫಾರೂಖ್ ಅಬ್ದುಲ್ಲಾಗೆ ಈಗ ಬಿಡುಗಡೆ ಭಾಗ್ಯ ಸಿಕ್ಕಿದೆ.

ಆದ್ರೆ ಫಾರೂಖ್ ಅಬ್ದುಲ್ಲಾ ಪುತ್ರ, ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿಯವರ ಗೃಹಬಂಧನವನ್ನು ಮುಂದುವರಿಸಲಾಗಿದೆ. ಇವರನ್ನೂ ಕೂಡ 2019ರ ಆಗಸ್ಟ್​ 5ರಿಂದ ಗೃಹಬಂಧನದಲ್ಲಿ ಇರಿಸಲಾಗಿದೆ.

-masthmagaa.com

Contact Us for Advertisement

Leave a Reply