ಚೀನಾ, ಕೆನಡಾ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಜೈಶಂಕರ್‌!

masthmagaa.com:

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ASEAN Regional Forum (ARF)ಸಚಿವರ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವ್ರು ಭಾಗವಹಿಸಿದ್ದಾರೆ. ಇದೆ ವೇಳೆ ಚೀನಾದ ಉನ್ನತ ರಾಜತಾಂತ್ರಿಕ ಅಧಿಕಾರಿ ವಾಂಗ್‌ ಯಿ ಅವ್ರನ್ನ ಭೇಟಿಯಾಗಿ ಉಭಯ ದೇಶಗಳ ನಡುವಿನ ಗಡಿ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾರತ ಹಾಗೂ ಚೀನಾ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿ, ಪೂರ್ವ ಏಷ್ಯಾ ಶೃಂಗಸಭೆ, ಬ್ರಿಕ್ಸ್‌ ಹಾಗೂ ಇಂಡೋ-ಪೆಸಿಫಿಕ್‌ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ ಅಂತ ಜೈಶಂಕರ್‌ ಹೇಳಿದ್ದಾರೆ. ಇನ್ನೊಂದ್‌ ಕಡೆ ಅತ್ತ ಕೆನಡಾ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಅವ್ರ ಜೊತೆಗೂ ಜೈಶಂಕರ್‌ ಮಾತುಕತೆ ನಡೆಸಿದ್ದಾರೆ. ಈ ವೇಳೆ ಖಲಿಸ್ತಾನಿ ಬೆಂಬಲಿಗರಿಂದ ಕೆನಡಾದಲ್ಲಿರೋ ರಾಜತಾಂತ್ರಿಕ ಅಧಿಕಾರಿಗಳಿಗೆ ಬೆದರಿಕೆ ಇರೋದ್ರಿಂದ ಅವ್ರಿಗೆ ಅಗತ್ಯ ಭದ್ರತೆ ಹಾಗೂ ಸುರಕ್ಷತೆ ನೀಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ಭಾರತ ಹಾಗೂ ಕೆನಡಾ ನಡುವಿನ ಆರ್ಥಿಕ ಸಹಕಾರ ಹಾಗೂ ಇಂಡೋ -ಪೆಸಿಫಿಕ್‌ ಕುರಿತು ಮೆಲಾನಿ ಚರ್ಚಿಸಲಾಗಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply