ಬಳ್ಳಾರಿ ಟೆನ್ಶನ್ ನಡುವೆ ಜಮಖಂಡಿ ಟೆನ್ಶನ್..!

ಬಳ್ಳಾರಿ ಜಿಲ್ಲೆ ವಿಭಜನೆ ಬಗ್ಗೆ ಏನ್ ಮಾಡ್ಬೇಕು ಅಂತ ಸರ್ಕಾರಕ್ಕೆ ಗೊತ್ತಾಗ್ತಿಲ್ಲ. ಯಾಕಂದ್ರೆ ಹೊಸ ವಿಜಯನಗರ ಜಿಲ್ಲೆ ರಚನೆಗೆ ಪ್ರಕ್ರಿಯೆ ಶುರು ಮಾಡಿರುವ ಸರ್ಕಾರಕ್ಕೆ ಹೊಸ ತಲೆನೋವು ಎದುರಾಗಿದೆ. ಬಾಗಲಕೋಟೆಯ ಜಮಖಂಡಿ ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಕೂಗು ಶುರುವಾಗಿದೆ. ಅಲ್ಲದೆ ಇದೇ ವಿಚಾರವಾಗಿ ನಾಳೆ ಬಾಗಲಕೋಟೆ ನಗರ ಬಂದ್‍ಗೆ ಕರೆ ನೀಡಲಾಗಿದೆ. 1966ರಿಂದಲೂ ಜಮಖಂಡಿ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟ ನಡೆಯುತ್ತಲೇ ಇದೆ. 1997ರಿಂದ ಪ್ರತ್ಯೇಕ ಹೋರಾಟ ನಡೆಯುತ್ತಿದೆ. ಆದ್ರೂ ಸರ್ಕಾರ ಪ್ರತ್ಯೇಕ ಜಿಲ್ಲೆ ರಚನೆಗೆ ಮುಂದಾಗುತ್ತಿಲ್ಲ ಎಂದು ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ಇನ್ನು ಬಳ್ಳಾರಿ ವಿಭಜನೆ ಸಂಬಂಧ ಸಿಎಂ ಯಡಿಯೂರಪ್ಪ ಜಿಲ್ಲೆಯ ಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 3.30ಕ್ಕೆ ಈ ಮಹತ್ವದ ಸಭೆ ನಡೆಯಲಿದೆ.

Contact Us for Advertisement

Leave a Reply