ಜಮ್ಮು ಕಾಶ್ಮೀರ: ಉಗ್ರರ ಸಂಪರ್ದಲ್ಲಿದ್ದ ಪೊಲೀಸ್‌ ಅಧಿಕಾರಿ ಬಂಧನ

masthmagaa.com:

ಜಮ್ಮು -ಕಾಶ್ಮೀರದ ಪೊಲೀಸ್ ಅಧಿಕಾರಿ ಶೇಖ್ ಅದಿಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಉಗ್ರರ ಜತೆ ನಂಟು ಹೊಂದಿರುವ ಆರೋಪದ ಮೇಲೆ ಡಿವೈಎಸ್‌ಪಿ ಶೇಖ್‌ ಅದಿಲ್‌ನನ್ನು ಪೊಲೀಸರು ಬಂಧಿಸಿದ್ದು ಅವರನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಅಧಿಕಾರಿಯನ್ನ ಕೆಲ ಉಗ್ರರ ಜೊತೆ ನಿಕಟ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಶಂಕಿತ ಭಯೋತ್ಪಾದಕರಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆ ಅಂತ ಮಾರ್ಗದರ್ಶನ ನೀಡುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಅಲ್ದೆ ಕೆಲ ಶಂಕಿತ ಉಗ್ರರಿಂದ ಶೇಖ್ ಅದಿಲ್ ಹಣ ಪಡೆದಿದ್ದ ಅಂತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply