ಜಮ್ಮು ಕಾಶ್ಮೀರದಲ್ಲಿ ರಾಜಕೀಯ ನಾಯಕರಿಗೆ ಗಾಂಧಿ ಜಯಂತಿ ಗಿಫ್ಟ್

ಇವತ್ತು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಕೆಲ ನಾಯಕರಿಗೆ ರಿಲೀಫ್ ಸಿಕ್ಕಿದೆ. 370ನೇ ವಿಧಿ ರದ್ದತಿ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ರಾಜಕೀಯ ನಾಯಕರನ್ನು ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ಹಲವರಿಗೆ ಗೃಹಬಂಧನ ವಿಧಿಸಿದ್ದರು. ಇವತ್ತು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗೃಹಬಂಧನಕ್ಕೆ ಒಳಗಾಗಿದ್ದ ನಾಯಕರಲ್ಲಿ ಹಲವರನ್ನು ಬಿಡುಗಡೆಗೊಳಿಸಲಾಗಿದೆ. ಇವರಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಪ್ಯಾಂಥರ್ಸ್ ಪಕ್ಷದ ಸದಸ್ಯರೂ ಸೇರಿದ್ದಾರೆ. ಅಲ್ಲದೆ ಡೋಗ್ರಾ ಸ್ವಾಭಿಮಾನಿ ಸಂಘಟನೆಯ ಅಧ್ಯಕ್ಷ ಚೌಧರಿ ಲಾಲ್ ಸಿಂಹ ಕೂಡ ಬಿಡುಗಡೆಯಾಗಿದ್ದಾರೆ. ಕಳೆದ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿಯನ್ವಯ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ಹೀಗಾಗಿ ಶಾಂತಿ ಕಾಪಾಡುವ ದೃಷ್ಟಿಯಿಂದ ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿತ್ತು.

Contact Us for Advertisement

Leave a Reply