ಭಯಂಕರ ದಾಳಿಗೆ ಸ್ಕೆಚ್ ಹಾಕಿದ್ದ ಉಗ್ರರು ಅಂದರ್​..!

ಜಮ್ಮು ಕಾಶ್ಮೀರದ ನಾರಾನಾಗ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಬಂಧಿತರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿದ್ದಾರೆ ಅಂತ ಭದ್ರತಾ ಪಡೆಗಳಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಯೋಧರು ಉಗ್ರರಿಗಾಗಿ ಶೋಧ ಕಾರ್ಯ ನಡೆಸಿ, ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. ಇಬ್ಬರೂ ಬಂಧಿತ ಉಗ್ರರು ಲಷ್ಕರ್ ಎ ತೊಯ್ಬಾ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.

ಸದ್ಯ ವಿಚಾರಣೆ ನಡೆಸುತ್ತಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೂಲಗಳ ಪ್ರಕಾರ ಈ ಉಗ್ರರು ಗೈಡ್​ಗಳಾಗಿ ಕೆಲಸ ಮಾಡುತ್ತಿದ್ದರು. ಜಮ್ಮು ಕಾಶ್ಮೀರದ ನಾರಾನಾಗ್ ಪ್ರದೇಶದಲ್ಲಿ ದಾಳಿ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಇಬ್ಬರೂ ರಜೌರಿ ಮೂಲದವರಾಗಿದ್ದು ಲಷ್ಕರ್ ಸಂಘಟನೆಗಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

Contact Us for Advertisement

Leave a Reply