ಜೆಡಿಎಸ್‌ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ!

masthmagaa.com:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಬಳಿಕ ಮಾತಾಡಿದ ಅವರು, ಹೊಸ ಸರ್ಕಾರ ಬಂದಿದೆ. ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಇತ್ತು. ಈ ಅವಕಾಶವನ್ನ ಹಣದಿಂದ, ಮತ್ತೊಂದರಿಂದ ಕಾಂಗ್ರೆಸ್ ಗೆದ್ದಿದೆ. ನಮ್ಮದು ‌ಪ್ರಾದೇಶಿಕ ಪಕ್ಷ. ನಮ್ಮಲ್ಲಿ ದೊಡ್ಡ ಮಟ್ಟದಲ್ಲಿ ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರು ನಾವು 60 ಲಕ್ಷ ಮತ ಪಡೆದಿದ್ದೇವೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯ್ತಿ ಹಾಗೂ ಲೋಕಸಭೆ ಚುನಾವಣೆಗೆ ನಾವು ಸಿದ್ದವಾಗಿ ಕೆಲಸ ಮಾಡ್ತೀವಿ ಎಂದಿದ್ದಾರೆ.

-masthmagaa.com

Contact Us for Advertisement

Leave a Reply