ಡಿಕೆ ಶಿವಕುಮಾರ್‌ ಸಿಎಂ ಆದ್ರೆ ಜೆಡಿಎಸ್‌ ಬೆಂಬಲ ಕೊಡುತ್ತೆ: HDK

masthmagaa.com:

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಬಿಸಿ ಬಿಸಿ ಚರ್ಚೆಗಳು ನಡಿತಿವೆ. ಇದರ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್‌ ಅವ್ರು ಸಿಎಂ ಆಗೋದಾದ್ರೆ ಜೆಡಿಎಸ್‌ನ 19 ಶಾಸಕರು ಬೆಂಬಲ ಕೊಡ್ತೀವಿ ಅಂತ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರು ಆಫರ್‌ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕುಮಾರ್‌ಸ್ವಾಮಿ, ಡಿ.ಕೆ.ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆದರೆ ನಾವು ಬೆಂಬಲ ನೀಡುತ್ತೇವೆ ಅಂತ ತಮಾಷೆಗೆ ಹೇಳಿದರೋ ಅಥ್ವಾ ಸೀರಿಯಸ್‌ ಆಗಿ ಹೇಳಿದ್ರೂ ಅದನ್ನ ಎಚ್‌ಡಿಕೆನೆ ಹೇಳ್ಬೇಕು. ಒಟ್ನಲ್ಲಿ ಕಾಂಗ್ರೆಸ್‌ ಒಳಗಡೆ ಅಸಮಾಧಾನ ಹೊಗೆ ಎದ್ದಿರೋದನ್ನ ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಅಂತ ಹೇಳಲಾಗ್ತಿದೆ. ಇನ್ನು ಇದೇ ವೇಳೆ ಕಾಂಗ್ರೆಸ್ ಪರಿಸ್ಥಿತಿ ನೋಡಿದ್ರೆ ಎಷ್ಟು ಜನ ಸಿಎಂ ಆಗ್ತಾರೆ ಗೊತ್ತಿಲ್ಲ. ಇದನ್ನ ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಅಂತ ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply