ಕರ್ನಾಟಕದ ಬಹುಬೇಡಿಕೆಯ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಗ್ರೀನ್‌ ಸಿಗ್ನಲ್!

masthmagaa.com:

ಬಹುದಿನಗಳಿಂದ ನೆಡೆಯುತ್ತಿದ್ದ, ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿಡಿಯೋ ಮೂಲಕ ತಿಳಿಸಿದ್ದಾರೆ. ಕರ್ನಾಟಕಕ್ಕೆ ಅಗತ್ಯವಾಗಿರೋ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್‌ ಶೇಖಾವರ್‌ ಅವ್ರಿಗೆ ಧನ್ಯವಾದ ಅಂತ ಹೇಳಿದ್ದಾರೆ. ಜೊತೆಗೆ ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡ ಹೋರಾಟ ಮಾಡಿದ್ವಿ. ಇದೀಗ ವಿಸ್ತೃತ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕೆ ಬೊಮ್ಮಾಯಿ, ಕಾರಜೋಳ ಅವ್ರಿಗೂ ಅಭಿನಂದನೆ ಸಲ್ಲಿಸುತ್ತೇನೆ ಅಂತ ಹೇಳಿದ್ದಾರೆ. ಈ ಮೂಲಕ ಧಾರವಾಡ, ಬೆಳಗಾವಿ, ಗದಗ ಸೇರಿ ಹಲವು ಜಿಲ್ಲೆಗಳ ರೈತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಾಂತಾಗಿದೆ. ಅಂದಹಾಗೆ ಕಾಂಗ್ರೆಸ್ ಜನವರಿ 2 ರಂದು ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ಮಾಡೋಕೆ ಸಿದ್ಧತೆ ನಡೆಸಿತ್ತು. ಆದ್ರೆ ಕಾಂಗ್ರೆಸ್‌ನ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ನೀಡುವ ಮೂಲಕ ಬಿಜೆಪಿ ಟಕ್ಕರ್‌ ಕೊಟ್ಟಿದೆ. ಅಂದ್ಹಾಗೆ ಕಳಸಾ-ಬಂಡೂರಿ ನಾಲಾ ಯೋಜನೆಯು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸಲು ಕರ್ನಾಟಕ ಸರ್ಕಾರ ಕೈಗೊಂಡ ಒಂದು ಯೋಜನೆ. ಮಹದಾಯಿ ನದಿಯ ಉಪನದಿಗಳಾದ ಕಳಸಾ-ಬಂಡೂರಿಯ 7.56TMC ನೀರನ್ನ ತಿರುಗಿಸಿ ಮಲಪ್ರಭಾ ನದಿಗೆ ಸೇರಸಲು ಕಳಸಾ -ಬಂಡೂರಿಗೆ ಅಡ್ಡಲಾಗಿ ಡ್ಯಾಂ ಕಟ್ಟುವ ಯೋಜನೆ ಹಾಕಿತ್ತು. ಆದ್ರೆ ಈ ಯೋಜನೆಗೆ ಗೋವಾ ಆಕ್ಷೇಪಣೆ ವ್ಯಕ್ತಪಡಿಸಿತ್ತು.

-masthmagaa.com

Contact Us for Advertisement

Leave a Reply