masthmagaa.com:

ಪಶ್ಚಿಮ ಬಂಗಾಳ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟದ ಬಳಿಕ ಟಿಎಂಸಿ ಮತ್ತು ಬಿಜೆಪಿ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಇದೀಗ ಗೃಹಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಕಾಂಗ್ರೆಸ್ ಹೊಸ ಆರೋಪವನ್ನು ಮಾಡಿದೆ. ಅಮಿತ್ ಶಾ ರಾಜ್ಯದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಹೆದರಿಸಿ, ಪಶ್ಚಿಮ ಬಂಗಾಳದಲ್ಲಿ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಲು ಯತ್ನಿಸುತ್ತಿದ್ದಾರೆ ಅಂತ ಆರೋಪಿಸಿದೆ.

ಘಟನೆ ಬಳಿಕ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಕೇಂದ್ರ ಗೃಹಕಾರ್ಯದರ್ಶಿ ಅಜಯ್ ಬಲ್ಲಾ, ಪಶ್ಚಿಮ ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ನೀಡುವಂತೆ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾಗೆ ಪತ್ರ ಬರೆದಿರುವ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, ಈ ಮೂವರೂ ಐಪಿಎಸ್ ಅಧಿಕಾರಿಗಳು ಜೆ.ಪಿ.ನಡ್ಡಾ ಬೆಂಗಾವಲು ಪಡೆಗೆ ಕಲ್ಲು ತೂರಲಾಗಿದ್ದ ಸ್ಥಳದಲ್ಲೇ ಇದ್ದರು. ಹೀಗಾಗಿ ನೀವು ಅಧಿಕಾರಿಗಳ ಮೇಲೆ ಒತ್ತಡ ಹೇರಲು ಈ ರೀತಿ ಮಾಡ್ತಿದ್ದೀರಿ ಅಂತ ಆರೋಪಿಸಿದ್ದಾರೆ.

ಡಿಸೆಂಬರ್ 10ರಂದು ಜೆಪಿ ನಡ್ಡಾ ಅವರ ಬೆಂಗಾವಲು ಪಡೆ ವಾಹನದ ಮೇಲೆ ದಾಳಿ ನಡೆಸಲಾಗಿತ್ತು. 50 ಬೈಕ್ ಮತ್ತು 30 ಕಾರುಗಳೊಂದಿಗೆ ಬಂದಿದ್ದ ಬಿಜೆಪಿ ಪಡೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

-masthmagaa.com

Contact Us for Advertisement

Leave a Reply