masthmagaa.com:

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆದ ಸ್ಯಾಂಡಲ್​ವುಡ್​ನ ಎರಡನೇ ನಟಿ ಇವರಾಗಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ಬಂಧಿಸಿದ್ದರು.

ಅಂದ್ಹಾಗೆ ಇಂದು ಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಜನಾ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು. ಇನ್ಸ್​ಪೆಕ್ಟರ್ ಪುನೀತ್, ಅಂಜುಮಾಲಾ ನಾಯಕ್, ಎಸಿಪಿ ಗೌತಮ್ ಮತ್ತು ಡಿಸಿಪಿ ರವಿಕುಮಾರ್ ಮುಂತಾದವರು ಸಂಜನಾ ಗಲ್ರಾನಿಯನ್ನು ಮೂರ್ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅರೆಸ್ಟ್ ಮಾಡಿದ್ದಾರೆ.

ಸಂಜನಾರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್​ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ ಹೆಚ್ಚಿನ ವಿಚಾರಣೆಗಾಗಿ ನಟಿಯನ್ನು ಕಸ್ಟಡಿಗೆ ಕೊಡುವಂತೆ ಸಿಸಿಬಿ ಪೊಲೀಸರು ಕೋರ್ಟ್​ಗೆ ಮನವಿ ಮಾಡಲಿದ್ದಾರೆ.

-masthmagaa.com

Contact Us for Advertisement

Leave a Reply