masthmagaa.com:

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ನ ಮತ್ತೊಬ್ಬ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿಯನ್ನು ವಶಕ್ಕೆ ಪಡೆದು ಬಂಧಿಸಲಾಗಿತ್ತು. ಇದೀಗ ಸಂಜನಾ ಗಲ್ರಾನಿಯನ್ನು ವಶಕ್ಕೆ ಪಡೆಯಲಾಗಿದ್ದು, ಇವತ್ತೇ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಅಂದ್ಹಾಗೆ ಇಂದು ಬೆಳಗ್ಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಜನಾ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತರಲಾಯ್ತು. ಸದ್ಯ ಸಿಸಿಬಿ ಕಚೇರಿಯಲ್ಲಿ ಇನ್ಸ್​ಪೆಕ್ಟರ್ ಪುನೀತ್, ಅಂಜುಮಾಲಾ ನಾಯಕ್, ಎಸಿಪಿ ಗೌತಮ್ ಮತ್ತು ಡಿಸಿಪಿ ರವಿಕುಮಾರ್ ಡ್ರಗ್ಸ್ ಪ್ರಕರಣದ ಬಗ್ಗೆ ಸಂಜನಾ ಗಲ್ರಾನಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

-masthmagaa.com

Contact Us for Advertisement

Leave a Reply