ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ಜಾರಿ!

masthmagaa.com:

ರಾಜ್ಯದಲ್ಲಿ ಇಂದಿನಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೆ ಬಂದಿದೆ. ಈ ಮೂಲಕ ಇಡೀ ದೇಶದಲ್ಲಿ ಈ ನೀತಿ ಜಾರಿಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಕರ್ನಾಟಕ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿಯಿಂದಲೇ ವರ್ಚುವಲ್ ವೇದಿಕೆ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಹಸಿರು ನಿಶಾನೆ ತೋರಿಸಿದ್ರು. ಇದೇ ವೇಳೇ ಈ ನೀತಿಯಡಿ ಉನ್ನತ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳ ದಾಖಲಾತಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಅಕ್ಟೋಬರ್​ 1ರಿಂದ ಪದವಿ ಮೊದಲ ವರ್ಷದ ತರಗತಿ ಆರಂಭವಾಗದೆ. ಮೊದಲ ವರ್ಷದ ಪದವಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿ ನೀಡಲಾಗುತ್ತೆ ಅಂತ ಘೋಷಿಸಿದ್ರು. ಇನ್ನು ಶಿಕ್ಷಣ ನೀತಿಯ ಜಾರಿ ವೇಳೆ ಗೊಂದಲ ಆಗಬಾರ್ದು ಅಂತ ಕಾಲೇಜು ಶಿಕ್ಷಣ ಇಲಾಖೆ ಸಹಾಯವಾಣಿ ನಂಬರ್ ಬಿಡುಗಡೆ ಮಾಡಲಾಗಿದೆ- ಅದು ಈ ರೀತಿ ಇದೆ 080-24486666. ಇದೇ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾ.ಕೆ. ಕಸ್ತೂರಿರಂಗನ್ ಸೇರಿದಂತೆ ಹಲವರನ್ನ ಸನ್ಮಾನಿಸಲಾಯ್ತು.

-masthmagaa.com

Contact Us for Advertisement

Leave a Reply