ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು! ಯಾಕೆ?

masthmagaa.com:

ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಜಾರಿ ವಿಳಂಬ ಹಾಗೂ ಮತಾಂತರ ನಿಷೇಧ ಕಾಯ್ದೆ ವಾಪಾಸ್‌ ನಿರ್ಧಾರವನ್ನ ವಿರೋಧಿಸಿ ಮಾಜಿ ಸಿಎಂ ಯಡಿಯೂರಪ್ಪ ಅವ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ ಸೇರಿದಂತೆ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದಾರೆ. ಈ ವೇಳೆ ಕಾಂಗ್ರೆಸ್ 5 ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಮಾತ್ರ ಜಾರಿಗೊಂಡಿದೆ. ಇನ್ನು ಅನ್ನಭಾಗ್ಯ ಯೋಜನೆ ಜಾರಿಯಾದ್ರೂ ಅಕ್ಕಿ ಬದಲಾಗಿ ಫಲಾನುಭವಿಗಳಿಗೆ ಹಣ ನೀಡಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಬಿಟ್ಟು ಕಾಂಗ್ರೆಸ್ ಘೋಷಣೆ ಮಾಡಿದ್ದ 10 ಕೆಜಿ ಅಕ್ಕಿಯ ಹಣ ಕೊಡಬೇಕು ಅಂತ ಬಿಜೆಪಿ ನಾಯಕರು ಸರ್ಕಾರವನ್ನ ಆಗ್ರಹಿಸಿದ್ದಾರೆ.

-masthmagaa.com

Contact Us for Advertisement

Leave a Reply