ಚುನಾವಣಾ ಪ್ರಚಾರ ಸಮಿತಿ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಿದ ಬಿಜೆಪಿ!

masthmagaa.com:

ರಾಜ್ಯದಲ್ಲಿ ಇನ್ನೇನು ವಿಧಾನಸಭಾ ಚುನಾವಣೆ ಅನೌನ್ಸ್‌ ಆಗಲಿದೆ. ಹೀಗಾಗಿ ಬಿಜೆಪಿ ತನ್ನ ಚುನಾವಣಾ ಪ್ರಚಾರ ಸಮಿತಿ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ರಚನೆ ಮಾಡಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇಮಕವಾಗಿದ್ರೆ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವ್ರನ್ನ ನೇಮಿಸಲಾಗಿದೆ. 25 ಜನರ ಚುನಾವಣಾ ಪ್ರಚಾರ ಸಮಿತಿಯಲ್ಲಿ ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ, ಕೆ ಎಸ್‌ ಈಶ್ವರಪ್ಪ, ರಮೇಶ್‌ ಜಾರಕಿಹೊಳಿ ಹಾಗೂ ಬಿ ವೈ ವಿಜಯೇಂದ್ರ ಅವ್ರಿಗೆ ಸ್ಥಾನ ನೀಡಲಾಗಿದೆ.) ಇನ್ನು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿಲಿದ್ದಾರೆ ಅಂತ ಹೇಳಲಾಗ್ತಿರೊ ವಿ ಸೋಮಣ್ಣ ಅವ್ರನ್ನ ಎರಡು ಸಮಿತಿಯಿಂದ ಕೈ ಬಿಡಲಾಗಿದೆ.

-masthmagaa.com

Contact Us for Advertisement

Leave a Reply