ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಡಿ, ಕರ್ನಾಟಕದ ಬಸ್‌ಗಳಿಗೆ ಬಿತ್ತು ಬೆಂಕಿ!

masthmagaa.com:

ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ನಿನ್ನೆ ಹಿಂಸಾಚಾರಕ್ಕೆ ತಿರುಗಿದೆ. ಘಟನೆಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಸೇರಿದ 10 ಬಸ್ಸಿಗೆ ಬೆಂಕಿ ಹಚ್ಚಲಾಗಿದೆ. ಈ ವೇಳೆ 18 ಪೊಲೀಸರು ಮತ್ತು 20ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಈ ಹಿಂದೆ ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ ನೀಡಿದ್ದ ಮೀಸಲಾತಿಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಜಾಲ್ನಾ ಜಿಲ್ಲೆಯ ಶಹಘಡ ಬಳಿ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದ ಮರಾಠಾ ಹೋರಾಟಗಾರರು ಹಿಂಸೆಗೆ ಇಳಿದಿದ್ದಾರೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ಬಸ್ಸಿಗೆ ಬೆಂಕಿ ಹಾಕಲಾಗಿದ್ದು, ಎಲ್ಲ 10 ಬಸ್ಸು ಕರ್ನಾಟಕದ ಸಾರಿಗೆ ಸಂಸ್ಥೆಗಳ ಬಸ್ಸುಗಳು ಅಂತ ಗೊತ್ತಾಗಿದೆ. ಇನ್ನು ಉದ್ರಿಕ್ತ ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ. ಜೊತೆಗೆ ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನಾಕಾರರನ್ನ ಚದುರಿಸಲಾಗಿದೆ. ಈ ಘಟನೆಗೆ ಪ್ರತಿಕ್ರಿಸಿಯಿರುವ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವ್ರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply