masthmagaa.com:

ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವರಿಷ್ಠರ ಬಳಿ ಚರ್ಚೆ ನಡೆಸಲು ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಬಿಎಸ್​ವೈ, ‘ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿ, ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ, ಸಚಿವ ಸಂಪುಟ ವಿಸ್ತರಣೆ, ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮತ್ತು ಇತರ ನಾಯಕರ ಜೊತೆ ಚರ್ಚೆ ನಡೆಸುತ್ತೇನೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಕೂಡ ಭೇಟಿಯಾಗ್ತೇನೆ’ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply