ಕಾಂಗ್ರೆಸ್‌ ಸೇರಿದ ಬೆನ್ನಲ್ಲೇ ಬಿ ಫಾರ್ಮ್‌ ಪಡೆದ ಜಗದೀಶ್‌ ಶೆಟ್ಟರ್!

masthmagaa.com:

4 ದಶಕಗಳ ಕಾಲ ಬಿಜೆಪಿಯಲ್ಲಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಬಿಜೆಪಿಯೊಂದಗಿನ ತಮ್ಮ ಸಂಬಂಧಕ್ಕೆ ತಿಲಾಂಜಲಿ ಹಾಡಿ ಕಾಂಗ್ರೆಸ್‌ ಸೇರಿದ್ದಾರೆ. ಕಾಂಗ್ರೆಸ್‌ ಸದಸ್ಯತ್ವ ಪಡೆದುಕೊಂಡ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕಾಂಗ್ರೆಸ್‌ನ ಬಿಫಾರ್ಮ್‌ ಪಡೆದಿದ್ದಾರೆ. ಇತ್ತ ಶೆಟ್ಟರ್‌ ಅವ್ರನ್ನ ನಡೆಸಿಕೊಂಡು ರೀತಿ ರಾಜ್ಯದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗ್ತಿದೆ.ಶೆಟ್ಟರ್‌ ಹಾಗೂ ಲಕ್ಷ್ಮಣ್‌ ಸವದಿ ಅವರ ಲಿಂಗಾಯತ ಮತಗಳು ಹಂಚಿಹೋಗದಂತೆ ತಡೆಯಲು ರಾಜ್ಯ ಬಿಜೆಪಿ ನಾಯಕರು ರಾಷ್ಟ್ರೀಯ ಅಧ್ಯಕ್ಷರಿಗೆ ಆಮಂತ್ರಣ ನೀಡಿದ್ದಾರೆ. ನಾಳೆ ಜೆ ಪಿ ನಡ್ಡಾ ಹುಬ್ಬಲ್ಳಿಗೆ ಆಗಮಿಸಿಲಿದ್ದಾರೆ. ಎರಡು ದಿನಗಳ ಕಾಲ ನಡ್ಡಾ ಹುಬ್ಬಳ್ಳಿಯಲ್ಲಿಯೇ ಠಿಕಾಣಿ ಹೂಡಲಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ನಡೆಯುವ ಎರಡು ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಅಂತ ಹೇಳಲಾಗಿದೆ. ಈ ವೇಳೆ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಲಿದ್ದಾರೆ. ಈ ಮೂಲಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಹುಬ್ಬಳ್ಳಿ-ಸೆಂಟ್ರಲ್​ ಬಿಜೆಪಿ ಮುಖಂಡರು ಹಾಗೂ ನಾಯಕರನ್ನು ಹಿಡಿದಿಟ್ಟುಕೊಳ್ಳುವ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply