ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 163ಕ್ಕೇರಿಕೆ..!ಇಂದು 12 ಮಂದಿಗೆ ಸೋಂಕು..!

masthmagaa.com:

ಬೆಂಗಳೂರು: ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಲೇ ಇದೆ. ಇಂದು ಒಂದೇ ದಿನ 12 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ. ಇವರ ಪೈಕಿ ಮೈಸೂರಿನವರೇ 7 ಮಂದಿ ಇರೋದು ಆತಂಕ ಮೂಡಿಸಿದೆ. ಇನ್ನು ಬಾಗಲಕೋಟೆ ಮತ್ತು ಬೆಂಗಳೂರಿನ ತಲಾ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇನ್ನು ಬೆಂಗಳೂರಿನಲ್ಲಿರುವ ಕೇರಳ ಮೂಲದ ಮಹಿಳೆಯೊಬ್ಬರಲ್ಲಿಯೂ ಕೊರೋನಾ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ವಿವಿಧ ಆಸ್ಪತ್ರೆಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಪ್ರಕ್ರಿಯೆ ಶುರುವಾಗಿದೆ.

-masthmagaa.com

 

Contact Us for Advertisement

Leave a Reply