ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ..!

masthmagaa.com:

ದಕ್ಷಿಣ ಕನ್ನಡ: ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದ ಪುತ್ತೂರು ಮೂಲದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಇವರು ಮಾರ್ಚ್​ 20ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದರು. ಇವರನ್ನು ಕ್ವಾರಂಟೈನ್​​ನಲ್ಲಿ ಇರಿಸಿ, ನಿಗಾ ಇಡಲಾಗಿತ್ತು. ಇದೀಗ ಅವರಲ್ಲಿ ಕೊರೋನಾ ಸೋಂಕು ದೃಢವಾಗಿದೆ.

ಈ ಮೂಲಕ  ಇಂದು ಒಂದೇ ದಿನ 5 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದಕ್ಕೂ ಮುನ್ನ ಮೈಸೂರಿನ ಮೂವರು, ಬೆಂಗಳೂರಿನ ಒಬ್ಬರಲ್ಲಿ ಸೋಂಕು ಪತ್ತೆಯಾಗಿತ್ತು.

-masthmagaa.com

Contact Us for Advertisement

Leave a Reply