4ರ ಬಾಲಕನಿಗೂ ಸೋಂಕು..! ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆ

masthmagaa.com:

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 191ಕ್ಕೆ ಏರಿಕೆಯಾಗಿದೆ. ಇಂದು ಮತ್ತೆ 10 ಮಂದಿಯಲ್ಲಿ ಈ ಮಹಾಮಾರಿ ಸೋಂಕು ಪತ್ತೆಯಾಗಿದೆ. ಬಾಗಲಕೋಟೆಯ ಮೂವರಿಗೆ ಕೊರೋನಾ ಸೋಂಕು ತಗುಲಿದ್ದು, 4 ವರ್ಷದ ಬಾಲಕನಲ್ಲೂ ಸೋಂಕು ಪತ್ತೆಯಾಗಿದೆ. ಇನ್ನು ಮೈಸೂರು, ಬೆಂಗಳೂರಿನಲ್ಲಿ ತಲಾ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಮಂಡ್ಯ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರದಲ್ಲೂ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನು ಗದಗದಲ್ಲಿ ಸೋಂಕು ಪತ್ತೆಯಾಗಿದ್ದ 80 ವರ್ಷದ ವೃದ್ಧೆ ಸಾವನ್ನಪ್ಪಿದ್ದು, ರಾಜ್ಯದಲ್ಲಿ 6 ಮಂದಿ ಈ ಮಹಾಮಾರಿಗೆ ಬಲಿಯಾದಂತಾಗಿದೆ.

-masthmagaa.com

Contact Us for Advertisement

Leave a Reply