ಕರ್ನಾಟಕದಲ್ಲಿ ಭಾರಿ ಆತಂಕದ ಪರಿಸ್ಥಿತಿ..!

masthmagaa.com:

ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಕಡಿಮೆಯಾಗುತ್ತಲೇ ಇಲ್ಲ. ದಿನೇ ದಿನೇ ಹೊಸ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಇಂದು ಮತ್ತೆ 36 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಇಷ್ಟು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನೊಂದು ಶಾಕಿಂಗ್ ವಿಚಾರ ಏನಪ್ಪಾ ಅಂದ್ರೆ ಇಂದು ಸೋಂಕು ಪತ್ತೆಯಾದವರಲ್ಲಿ ಬೆಳಗಾವಿಯವರೇ 17 ಮಂದಿ ಸೇರಿದ್ದಾರೆ. ಇನ್ನು ವಿಜಯಪುರದ ಒಂದೂವರೆ ವರ್ಷದ ಮಗು ಸೇರಿದಂತೆ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಂಗಳೂರಿನ ಐವರು, ಕಲಬುರಗಿಯಲ್ಲಿ 5 ವರ್ಷದ ಮಗು ಸೇರಿದಂತೆ ಮೂವರಿಗೆ ಸೋಂಕು ವಕ್ಕರಿಸಿದೆ. ಇನ್ನು ಮೈಸೂರಿನಲ್ಲೂ ಸಹ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಗದಗದಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಈ ಸೋಂಕಿನಿಂದ ಬಳಲುತ್ತಿದ್ದ 66 ವರ್ಷದ ವೃದ್ಧರೊಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದಂತಾಗಿದೆ. ಇನ್ನು ಈ ಸೋಂಕು ತಗುಲಿದವರಲ್ಲಿ 82 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

-masthmagaa.com

Contact Us for Advertisement

Leave a Reply