ʻಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟಕ್ಕೆ ಕೋರ್ಟ್‌ನಿಂದ ತಡೆಯಾಜ್ಞೆ!

masthmagaa.com:

ಟಿಪ್ಪು ಸುಲ್ತಾನ್‌ ಕುರಿತು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ರಚಿಸಿರೊ ನಾಟಕ ʻಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ರಫೀವುಲ್ಲ ಬಿಎಸ್‌ ಅನ್ನೊರು ಈ ಬಗ್ಗೆ ಅರ್ಜಿ ಸಲ್ಲಿಸಿದ್ರು. ಪುಸ್ತಕದಲ್ಲಿ ಅಜಾನ್‌ ಅನ್ನ ಅವಮಾನಿಸಲಾಗಿದೆ ಹಾಗೂ ಅನೇಕ ತಪ್ಪು ಮಾಹಿತಿಗಳನ್ನ ನೀಡಲಾಗಿದೆ. ಇದ್ರಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತೆ ಅಂತ ಅರ್ಜಿಯಲ್ಲಿ ಉಲ್ಲೇಖಿಸಿದ್ರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 14ನೇ ಹೆಚ್ಚುವರಿ ಸಿಟಿ ಸಿವಿಲ್‌ ಕೋರ್ಟ್‌ ಆನ್‌ಲೈನ್‌ ಸೇರಿದಂತೆ ಎಲ್ಲಿಯೂ ಮಾರಾಟ ಮಾಡದಂತೆ ತಡೆ ನೀಡಿದೆ.

-masthmagaa.com

Contact Us for Advertisement

Leave a Reply