ಕೇರಳದಲ್ಲಿ ಕೊರೋನಾ ಕಾಟ.. ದಕ್ಷಿಣ ಕನ್ನಡದಲ್ಲಿ ದೇಗುಲಗಳಿಗೆ ನಿರ್ಬಂಧ

masthmagaa.com:

ಕೊರೋನಾ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆಗಸ್ಟ್ 15ರವರೆಗೆ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನ ಜಾರಿ ಮಾಡಿದೆ. ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಗಳು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ಭಕ್ತರಿಗೆ ತೆರೆದಿರುತ್ತವೆ. ಆದ್ರೆ ತೀರ್ಥ, ಪ್ರಸಾದ ಮತ್ತು ಅನ್ನಸಂತರ್ಪಣ ಲಭ್ಯವಿರುವುದಿಲ್ಲ. ಶನಿವಾರ ಮತ್ತು ಭಾನುವಾರ ದೇವಸ್ಥಾನಗಳು ಭಕ್ತರಿಗೆ ಸಂಪೂರ್ಣವಾಗಿ ಬಂದ್ ಆಗಿರಲಿದ್ದು, ಅರ್ಚಕರು ದೈನಂದಿನ ಪೂಜೆ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಅಂದ್ಹಾಗೆ ದಕ್ಷಿಣ ಕನ್ನಡ ಜಿಲ್ಲೆ ಗಡಿ ಹಂಚಿಕೊಂಡಿರೋ ಕೇರಳದಲ್ಲಿ ಕೊರೋನಾ ಹಾವಳಿ ಹೆಚ್ಚಿರೋ ಹಿನ್ನೆಲೆ ಈ ನಿರ್ಬಂಧಗಳನ್ನ ಜಾರಿಗೆ ತರಲಾಗಿದೆ. ಕೇರಳದಲ್ಲಿ ಇವತ್ತು ಮತ್ತೆ 22 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 117 ಜನ ಮೃತಪಟ್ಟಿದ್ದಾರೆ.

-masthmagaa.com

Contact Us for Advertisement

Leave a Reply