ಹಿಜಬ್‌ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯೋಕೆ ಅವಕಾಶ ಇಲ್ಲ: ರಾಜ್ಯ ಸರ್ಕಾರ

masthmagaa.com:

ರಾಜ್ಯದಲ್ಲಿ ಹಿಜಬ್‌ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮಾರ್ಚ್‌ ತಿಂಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಬ್‌ ಧರಿಸಿ ಹಾಜರಾಗಲು ಅನುಮತಿ ನೀಡಬೇಕೆಂಬ ಮುಸ್ಲಿಂ ವಿದ್ಯಾರ್ಥಿನಿಯರ ಮನವಿಯನ್ನ ಪರಿಗಣಿಸದಂತೆ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸೂಚನೆ ಕೊಟ್ಟಿದೆ. ಹಿಜಬ್‌ ಧರಿಸಿ ಪರೀಕ್ಷೆ ಬರೆಯೋಕೆ ಅವಕಾಶ ಬೇಕು ಅಂತ ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಹೀಗಾಗಿ ಇದಕ್ಕೆ ಅವಕಾಶ ಇಲ್ಲ ಅಂತ ರಾಜ್ಯ ಶಿಕ್ಷಣ ಇಲಾಖೆ ಹೇಳಿದೆ.

-masthmagaa.com

Contact Us for Advertisement

Leave a Reply