ಸಿಎಂ ಬೊಮ್ಮಾಯಿ ವಿರುದ್ದ ಜೈಲು ಸೇರಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸ್ಪರ್ಧೆ?

masthmagaa.com:

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲು ಕಾಂಗ್ರೆಸ್ ಸಜ್ಜಾಗುತ್ತಿದೆ. ಇದರ ಭಾಗವಾಗಿ ಇಂದು ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಲುವಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಅಧ್ಯಕ್ಷತೆಯಲ್ಲಿ ದಿಲ್ಲಿಯಲ್ಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ರಾಹುಲ್‌ ಗಾಂಧಿ, ಕೆ ಸಿ ವೇಣುಗೋಪಾಲ್‌, ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ದ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ, ವಿನಯ್‌ ಕುಲಕರ್ಣಿ ಅವ್ರನ್ನ ಕಣಕ್ಕಿಳಿಸಲು ಕಾಂಗ್ರೆಸ್‌ ಸಮಿತಿ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply