ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ!

masthmagaa.com:

ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠಿ ಭಾಷಿಕರು ದಾಂದಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಅಂತ ಮಾಜಿ ಸಿಎಂ ಮತ್ತು ಜೆಡಿಎಸ್​ ನಾಯಕ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಹೆಚ್​. ಡಿ. ಕುಮಾರಸ್ವಾಮಿ, ‘ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ. ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ’ ಎಂದಿದ್ದಾರೆ.

-masthmagaa.com

Contact Us for Advertisement

Leave a Reply