‘ಇನ್ವೆಸ್ಟ್ ಕರ್ನಾಟಕ’ ಕ್ಕೆ 7 ಲಕ್ಷ ಕೋಟಿ ಹೂಡಿಕೆ ಹರಿದು ಬರುವ ನಿರೀಕ್ಷೆ: ಸಿಎಂ

masthmagaa.com:

ಇನ್ನು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ’ ನಾಳೆಯಿಂದ ಆರಂಭವಾಗಲಿದ್ದು, 7 ಲಕ್ಷ ಕೋಟಿ ರೂಪಾಯಿ ಹೂಡಿಕೆ ಹರಿದು ಬರುವ ಸಾಧ್ಯತೆ ಇದೆ. ಖಾಸಗಿ ವಲಯದಲ್ಲಿ 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಅಂತ ಬೊಮ್ಮಾಯಿ ಹೇಳಿದ್ದಾರೆ. ಅಲ್ದೇ ಕರ್ನಾಟಕ ರಾಜ್ಯ, ಅಭಿವೃದ್ದಿಯಲ್ಲಿ ದೇಶದ ‘ನಂಬರ್ 1’ ರಾಜ್ಯವಾಗುವ ಕಾಲ ಸನ್ನಿಹಿತವಾಗಿದೆ ಅಂತ ಭರವಸೆ ವ್ಯಕ್ತಪಡಿಸಿದ್ದಾರೆ. ಇನ್ನು ಮಂಗಳೂರಿನಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ ಕುಮಾರ್‌ ಕನ್ನಡದ ಪರಿಣಾಮಕಾರಿ ಅನುಷ್ಠಾನಕ್ಕೆ ಕನ್ನಡ ಸಮಗ್ರ ಮಸೂದೆಯನ್ನ ಡಿಸೆಂಬರ್‌ನಲ್ಲಿ ಅಂಗೀಕರಿಸಿ ಜಾರಿಗೊಳಿಸಲಿದ್ದೇವೆ ಅಂತ ಹೇಳಿದ್ರು.

-masthmagaa.com

Contact Us for Advertisement

Leave a Reply