ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಮೇಲಿನ FIR ರದ್ಧುಗೊಳಿಸಿದ ಕರ್ನಾಟಕ ಹೈಕೋರ್ಟ್‌! ಏನಿದು ಕೇಸ್‌?

masthmagaa.com:

ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವ್ರ ವಿರುದ್ಧ ದಾಖಲಿಸಲಾಗಿದ್ದ ಎಫ್​ಐಆರ್​ ಅನ್ನ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್​​ನ ಧಾರವಾಡ ಪೀಠ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. 2023ರ ಮೇ 7ರಂದು ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದ್ದ ನಡ್ಡಾ ವಿರುದ್ಧ ಪೊಲೀಸರು ಮೇ 11ರಂದು ಸ್ವಯಂ ಪ್ರೇರಿತರಾಗಿ ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದರ ರದ್ದತಿಗೆ ಮನವಿ ಮಾಡಿ ನಡ್ಡಾ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈಗ ಎಫ್​ಐಆರ್​​ ರದ್ದುಗೊಳಿಸಿ ತೀರ್ಪು ನೀಡಿದೆ.

-masthmagaa.com

Contact Us for Advertisement

Leave a Reply